ರಾಜ್ಯ

ವಿನಯ್ ಕುಲಕರ್ಣಿ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ನಡೆ! ಶಿಕ್ಷೆಗೆ ತಡೆ ನೀಡಿದ್ರೆ ಶಾಸಕ ಸ್ಥಾನ ಮರಳುತ್ತಾ?

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ಆದ್ರೆ ಪದೇ ಪದೇ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆಯಾಗ್ತಿದೆ.

ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್​ ಮೊರೆ

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್​​ನಲ್ಲಿ ಕಾಂಗ್ರೆಸ್​ ಮಾಜಿ ಸಚಿವ ವಿನಯ್​ ಕುಲಕರ್ಣಿ ಜೈಲು ಪಾಲಾಗಿದ್ದಾರೆ. ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್​ ಕುಲಕರ್ಣಿ ಶಾಸಕ ಸ್ಥಾನ ಕೂಡ ಕಳೆದುಕೊಂಡಿದ್ದಾರೆ. ಇದೀಗ ಶಿಕ್ಷೆಗೆ ತಡೆ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್​ನಲ್ಲಿ ಈ ಅರ್ಜಿ ಕುರಿತ ಪರ-ವಿರೋಧ ವಕೀಲರ ವಾದ ಮಂಡನೆ ಪೂರ್ಣಗೊಂಡಿದೆ.

ಹೈಕೋರ್ಟ್ ಮಹತ್ವದ ನಡೆ

ವಿನಯ್ ಕುಲಕರ್ಣಿ ಹಾಗೂ ಸಿಬಿಐ ಪರ ವಕೀಲರ ವಾದ ಮಂಡನೆ ಪೂರ್ಣಗೊಂಡಿದೆ. ವಾದ-ಪ್ರತಿವಾದ ಆಲಿಸಿದ ವಿನಯ್ ಕುಲಕರ್ಣಿ ಅವರು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದ್ದಾರೆ. ನ್ಯಾ. ಮೊಹಮ್ಮದ್ ನವಾಜ್, ನ್ಯಾ. ಜಿ. ಬಸವರಾಜ ಅವರಿರುವ ವಿಭಾಗೀಯ ಪೀಠವು ತೀರ್ಪು ಕಾಯ್ದಿರಿಸಿದೆ.

ಶಿಕ್ಷೆಗೆ ತಡೆ ನೀಡಿದ್ರೆ ಶಾಸಕ ಸ್ಥಾನ ಮರಳುತ್ತಾ?

ಜೀವಾವಧಿ ಶಿಕ್ಷೆಗೊಳಗಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ವಿನಯ್ ಕುಲಕರ್ಣಿ ಅವ್ರು ಶಿಕ್ಷೆಗೆ ತಡೆಯಾಜ್ಞೆ ಹಾಗೂ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದ್ರೆ ಮಾತ್ರ ವಿನಯ್ ಕುಲಕರ್ಣಿಗೆ ಶಾಸಕ ಸ್ಥಾನ ಮರಳಲಿದೆ. ಹೀಗಾಗಿ ಹೈಕೋರ್ಟ್ ಆದೇಶದ ಮೇಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಹಾಗೂ ಜಾಮೀನಿನ ಭವಿಷ್ಯ ನಿಂತಿದೆ.

ಏನಿದು ಪ್ರಕರಣ?

2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆ ಮಾಡಿತ್ತು.ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker