ರಾಜ್ಯ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆಗೆ ಹೊರಟ ಹೆಚ್​ಡಿ ಕುಮಾರಸ್ವಾಮಿ!

ಬೆಂಗಳೂರು : ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ, ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ಕುಮಾರಸ್ವಾಮಿ ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರ, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಜನರು ಯಾತ್ರೆ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker