ರಾಜ್ಯ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮುಖೇಶ್ ಅಂಬಾನಿ ಭೇಟಿ!

ಉಡುಪಿ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಅನಂತ ಅಂಬಾನಿ ಅವರು ದೇವಸ್ಥಾನದ ಧಾರ್ಮಿಕ ನಿಯಮಾವಳಿಗಳಿಗೆ ಅನುಗುಣವಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗರ್ಭಗುಡಿಯ ಎದುರು ಕೆಲಕಾಲ ಪ್ರಾರ್ಥನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker