ರಾಜ್ಯ

ಚಲಿಸುವಾಗಲೇ ಬಸ್‌ನ ಟೈರ್ ಕಳಚಿ ಅವಾಂತರ ! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಚಿಕ್ಕಮಗಳೂರು, ಅಕ್ಟೋಬರ್ 15 : ಚಲಿಸುತ್ತಿದ್ದ KSRTC ಬಸ್‌ನ ಟೈರ್ ದಿಢೀರನೆ ಕಳಚಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ತಪ್ಪಿದ್ದು, ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ .

ಶೃಂಗೇರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ತಲುಪುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಬಸ್ ಚಲಿಸುತ್ತಿದ್ದಾಗಲೇ ದಿಢೀರನೆ ಟೈರ್ ಕಳಚಿಬಿದ್ದಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್ ಅನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಚಾಲಕ ಸಮಯಪ್ರಜ್ಞೆ ತೋರಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದಂತಾಗಿದೆ.


https://www.facebook.com/share/v/1EpWc8nt63/

ಬಸ್‌ನಿಂದ ಕಳಚಿಬಿದ್ದ ಟೈರ್ ರಸ್ತೆಯಲ್ಲಿ ಉರುಳಿಕೊಂಡು ಹೋಗಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ, ಆ ವಾಹನಕ್ಕೆ ಹಾನಿಯಾಗಿದೆ. ಚಲಿಸುತ್ತಿದ್ದ ಬಸ್‌ನ ಟೈರ್ ಏಕಾಏಕಿ ಕಳಚಿಬಿದ್ದಿದ್ದರಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರಿಗೂ ಆತಂಕ ಎದುರಾಯಿತು. ಅದೃಷ್ಟವಶಾತ್ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಬಸ್ ಶಿವಮೊಗ್ಗ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಬಳಿಕ ಟೈರ್ ಕಳಚಿಕೊಂಡ ಸ್ಥಿತಿಯಲ್ಲೇ ಬಸ್ ರಸ್ತೆಯ ಮಧ್ಯದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದುವರಿಸಲಾಗದೆ ಕೆಲಕಾಲ ಪರದಾಡುವಂತಾಯಿತು. ನಡು ರಸ್ತೆಯಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಪ್ರಯಾಣಿಕರನ್ನು ಸುರಕ್ಷಿತವಾಗಿ ಗಮ್ಯಸ್ಥಾನಕ್ಕೆ ತಲುಪಿಸಬೇಕಾದ ಸರ್ಕಾರಿ ಬಸ್‌ನಲ್ಲೇ ಇಂತಹ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಬಸ್‌ಗಳಲ್ಲಿ ಪದೇಪದೇ ತಾಂತ್ರಿಕ ದೋಷಗಳು ಕಾಣಿಸಿಕೊಳ್ಳುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ನಿರ್ವಹಣಾ ವ್ಯವಸ್ಥೆ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್‌ಗಳನ್ನು ರಸ್ತೆಗಿಳಿಸುವ ಮುನ್ನ ಅವುಗಳ ತಾಂತ್ರಿಕ ಸ್ಥಿತಿಯನ್ನು ಸಮರ್ಪಕವಾಗಿ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.


https://kaveritv.com/arrest-me-if-you-have-the-guts-kumaraswamys-challenge-to-the-congress-government/

ವಿಶೇಷವಾಗಿ ದೂರದ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳ ಟೈರ್, ಬ್ರೇಕ್ ಸೇರಿದಂತೆ ಪ್ರಮುಖ ಬಿಡಿಭಾಗಗಳ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಅತ್ಯಗತ್ಯ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅಪಘಾತಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಸಾರಿಗೆ ಸಂಸ್ಥೆ ಈ ವಿಚಾರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ .

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದ ಈ ಘಟನೆ ಸರ್ಕಾರಿ ಸಾರಿಗೆ ಬಸ್‌ಗಳ ಸುರಕ್ಷತೆ ಮತ್ತು ನಿರ್ವಹಣೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದ್ದರೂ, ಚಲಿಸುತ್ತಿದ್ದ ಬಸ್‌ನ ಟೈರ್ ಕಳಚಿಬಿದ್ದಿರುವುದು ಗಂಭೀರವಾಗಿ ಪರಿಗಣಿಸಬೇಕಾದ ಸಂಗತಿಯಾಗಿದೆ .

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker