ಕ್ರೈಮ್

ಟೈಗರ್ ಶ್ರಾಫ್ ಮೇಲೆ ಫೈರಿಂಗ್ ! ಕೋಟಾದಲ್ಲಿ 3 ಆರೋಪಿಗಳ ಅರೆಸ್ಟ್ !

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ . ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ರಾಜಸ್ಥಾನದ ಕೋಟಾದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ . ಮುಂಬೈ ಪೊಲೀಸರಿಂದ ಬಂದ ಮಾಹಿತಿಯ ಆಧಾರದ ಮೇಲೆ ರಾಜಸ್ಥಾನ ಪೊಲೀಸರು ಕೋಟಾ ರೈಲು ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ .

ಬಂಧಿತರಲ್ಲಿ ಓರ್ವ ಅಪ್ರಾಪ್ತನೂ ಸೇರಿದ್ದಾನೆ. ಇನ್ನು ಆರೋಪಿಗಳು ಹರಿಯಾಣ ಮತ್ತು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಘಟನೆ ನಡೆದ ಕೇವಲ 24 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ .

ಅಷ್ಟಕ್ಕೂ, ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿದ್ದೇಕೆ ? ದಾಳಿಯ ಹಿಂದೆ ಯಾರಿದ್ದಾರೆ ? ಆರೋಪಿಗಳ ಬಂಧನದ ಬಳಿಕ ಪ್ರಕರಣಕ್ಕೆ ಯಾವ ತಿರುವು ಸಿಗಲಿದೆ ?

ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಫುಟ್ಬಾಲ್ ಪಂದ್ಯ ಮುಗಿಸಿ ತಮ್ಮ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ …

ಅದೃಷ್ಟವಶಾತ್, ಟೈಗರ್ ಶ್ರಾಫ್ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ ಅಂತೆ . ಆದರೆ, ಅವರ ಕಾರಿನ ಚಾಲಕ ಹಾಗೂ ಆಟೋ ರಿಕ್ಷಾ ಚಾಲಕರೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ .

ಇನ್ನು ಈ ಗುಂಡಿನ ದಾಳಿ ಪ್ರಕರಣದ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಸಂದೇಶ ಹರಿದಾಡಿರುವುದಾಗಿ ವರದಿಯಾಗಿದೆ. ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡುವ ಚಿತ್ರರಂಗದ ವ್ಯಕ್ತಿಗಳನ್ನು ಗುರಿಯಾಗಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ .

ಆದರೆ, ಈ ಬೆದರಿಕೆಯ ಮೂಲ ಹಾಗೂ ದಾಳಿಯೊಂದಿಗಿನ ಅದರ ಸಂಬಂಧವನ್ನು ಅಧಿಕೃತವಾಗಿ ದೃಢಪಡಿಸುವುದು ತನಿಖೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ .

ಗುಂಡಿನ ದಾಳಿಯ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅವರು ಅಂಧೇರಿ ರೈಲು ನಿಲ್ದಾಣದ ಕಡೆಗೆ ತೆರಳಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ .. ಶಂಕಿತರಲ್ಲಿ ಇಬ್ಬರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅವರ ಉಡುಪುಗಳ ವಿವರಗಳೂ ತನಿಖೆಗೆ ನೆರವಾಗಿವೆ …

ಇನ್ನೊಂದೆಡೆ , ಆರೋಪಿಗಳು ಪರಾರಿಯಾಗುವ ಸಂದರ್ಭದಲ್ಲಿ ಅಂಧೇರಿ ರೈಲು ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾರೆ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಬೈಕ್ನ ನೋಂದಣಿ ದಾಖಲೆಗಳು, ನಂಬರ್ ಪ್ಲೇಟ್, ಚಾಸಿಸ್ ಸಂಖ್ಯೆ ಹಾಗೂ ಎಂಜಿನ್ ಸಂಖ್ಯೆಯನ್ನು ಪರಿಶೀಲಿಸುವ ಮೂಲಕ ಅದರ ಮಾಲೀಕತ್ವ ಮತ್ತು ಆರೋಪಿಗಳೊಂದಿಗಿನ ಸಂಪರ್ಕವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ .

ಈ ನಡುವೆ, ಮುಂಬೈ ಪೊಲೀಸರ ಮಾಹಿತಿಯ ಮೇರೆಗೆ ರಾಜಸ್ಥಾನ ಪೊಲೀಸರು ಕಾರ್ಯಾಚರಣೆ ನಡೆಸಿ ಕೋಟಾ ರೈಲು ನಿಲ್ದಾಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಓರ್ವ ಅಪ್ರಾಪ್ತನಿದ್ದು, ಉಳಿದ ಆರೋಪಿಗಳು ಸೇರಿದಂತೆ ಬಂಧಿತರ ಮೂಲದ ಬಗ್ಗೆ ಹರಿಯಾಣ ಮತ್ತು ಬಿಹಾರಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿದೆ .

ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿರುವುದು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇದೀಗ ಬಂಧಿತರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುವುದು, ಗುಂಡಿನ ದಾಳಿಯ ಉದ್ದೇಶವನ್ನು ಪತ್ತೆಹಚ್ಚುವುದು ಹಾಗೂ ಈ ಪ್ರಕರಣದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬುದನ್ನು ತನಿಖೆ ನಡೆಸುವುದು ಪೊಲೀಸರ ಮುಂದಿರುವ ಪ್ರಮುಖ ಸವಾಲುಗಳಾಗಿವೆ .

ಒಟ್ಟಿನಲ್ಲಿ, ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾದಲ್ಲಿ ಮೂವರು ಆರೋಪಿಗಳ ಬಂಧನವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಆದರೆ, ದಾಳಿಯ ಹಿಂದಿನ ನಿಖರ ಉದ್ದೇಶವೇನು? ಬೆದರಿಕೆ ಸಂದೇಶಕ್ಕೂ ಈ ಘಟನೆಗೂ ಸಂಬಂಧವಿದೆಯೇ ? ಈ ಎಲ್ಲ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟ ಉತ್ತರ ಸಿಗಬೇಕಿದೆ .

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker