ರಾಜ್ಯ

ಆಂಬುಲೆನ್ಸ್‌ಗಳ ಕೊರತೆಗೆ ಬ್ರೇಕ್ ಹಾಕಲು ಸರ್ಕಾರದ ಪ್ಲ್ಯಾನ್!

ಬೆಂಗಳೂರು: ಅಪಘಾತವಾದಾಗ ಗೋಲ್ಡನ್ ಅವರ್‌ನಲ್ಲಿ ಚಿಕಿತ್ಸೆ ಸಿಗೋದು ತುಂಬಾನೇ ಮುಖ್ಯ. ಆದ್ರೆ ಸಕಾಲಕ್ಕೆ ಆಂಬುಲೆನ್ಸ್‌ ಸಿಗದಿದ್ರೆ ರೋಗಿಗಳ ಜೀವಕ್ಕೇ ಅಪಾಯ ಎದುರಾಗಬಹುದು. ರಾಜ್ಯದಲ್ಲಿ 108 ಆಂಬುಲೆನ್ಸ್‌ಗಳ ಕೊರತೆಯ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಯನ್ನು ಬಲಪಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹಳೆಯ ಆಂಬುಲೆನ್ಸ್‌ಗಳ ಬದಲಿಗೆ ಹೊಸ ವಾಹನಗಳನ್ನು ಖರೀದಿಸಲು ಸಿದ್ಧತೆ ನಡೆಸಿದೆ.

ರೋಡ್‌ ಸೇಫ್ಟಿ ಯೋಜನೆಯಡಿ ಮೊದಲ ಹಂತದಲ್ಲಿ 100 ಹೊಸ ಆಂಬುಲೆನ್ಸ್‌ಗಳನ್ನು ಖರೀದಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈಗಾಗಲೇ ಹೊಸ ವಾಹನಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲಾಗಿರುವ ಬಗ್ಗೆ ಈ ಹಿಂದೆ ಮಾಹಿತಿ ನೀಡಲಾಗಿತ್ತು. ಇದರ ಜೊತೆಗೆ ಇನ್ನೂ 450 ಆಂಬುಲೆನ್ಸ್‌ಗಳನ್ನು ಖರೀದಿಸುವ ಬಗ್ಗೆಯೂ ಚಿಂತನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವುದರಿಂದ ಹಿಡಿದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೆರವಾಗುವವರೆಗೆ ಆಂಬುಲೆನ್ಸ್‌ಗಳ ಪಾತ್ರ ಮಹತ್ವದ್ದು. ಹೊಸ ವಾಹನಗಳು ಸೇವೆಗೆ ಸೇರಿದರೆ ಆಂಬುಲೆನ್ಸ್‌ಗಳ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ಸರ್ಕಾರದ ಈ ಕ್ರಮ ತುರ್ತು ಆರೋಗ್ಯ ಸೇವೆಗೆ ಎಷ್ಟು ಬಲ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker