ಅಂತರರಾಷ್ಟ್ರೀಯರಾಜ್ಯ

ಶಿವಮೊಗ್ಗದ KSOU ಪ್ರಾದೇಶಿಕ ಕಚೇರಿಯಲ್ಲಿ ಸಾಮೂಹಿಕ ನಕಲು ಆರೋಪ

ಶಿವಮೊಗ್ಗ, ಅಕ್ಟೋಬರ್ 23: ಶಿವಮೊಗ್ಗ ನಗರದ ಆಲ್ಕೋಳ ವೃತ್ತದ ಬಳಿ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆಯುತ್ತಿರುವ ವಿವಿಧ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪ್ರಾದೇಶಿಕ ಕಚೇರಿಯ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಈ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿಗಳಿಂದ ಹಣ ಪಡೆದು ಪರೀಕ್ಷೆಯಲ್ಲಿ ಮುಕ್ತವಾಗಿ ನಕಲು ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ದೂರೂ ಕೇಳಿಬಂದಿದೆ.

ಈ ರೀತಿಯ ಅಕ್ರಮಗಳಿಂದ ಪ್ರಾಮಾಣಿಕವಾಗಿ ಅಧ್ಯಯನ ಮಾಡಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಅರ್ಹತೆ ಮತ್ತು ಪರಿಶ್ರಮಕ್ಕೆ ಬೆಲೆ ಸಿಗಬೇಕಾದ ಪರೀಕ್ಷಾ ವ್ಯವಸ್ಥೆಯಲ್ಲಿ ಇಂತಹ ಅಕ್ರಮಗಳು ನಡೆಯುತ್ತಿರುವುದು ಶಿಕ್ಷಣದ ಗುಣಮಟ್ಟ ಹಾಗೂ ಪರೀಕ್ಷಾ ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಾಮೂಹಿಕ ನಕಲು ಹಾಗೂ ಹಣ ವಸೂಲಿ ಆರೋಪಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಒತ್ತಾಯಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker