ರಾಜ್ಯ

ಬೆಂಗಳೂರಿನಿಂದ ಕೇರಳಕ್ಕೆ ನಕಲಿ ಸಿಗರೇಟ್ ಸಾಗಾಟ: ಸಿಸಿಬಿ ಬಲೆಗೆ ಇಬ್ಬರು..!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ಸಿಗರೇಟ್‌ಗಳ ಅಕ್ರಮ ಸಾಗಾಟ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಉಪ್ಪಾರಪೇಟೆ ಪೊಲೀಸರು ಹಾಗೂ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿ, ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನಿಂದ ಕೇರಳಕ್ಕೆ ಎರಡು ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್‌ಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಮಹಮದ್ ರಿಯಾಝ್ ಹಾಗೂ ಕುಮಾರನ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಮಾಧ್ಯಮಗಳ ಜೊತೆ ನಾನು ಮಾತನಾಡಲ್ಲ ಎಂದ ಸಿದ್ದರಾಮಯ್ಯ..! – Kaveri TV Kannada New 24×7 | Breaking news, politics, current affairs, live coverage of Karnataka Assembly sessions, public events, and regional news.

ಈ ಕಾರ್ಯಾಚರಣೆಯಲ್ಲಿ ಸುಮಾರು ₹20 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದೇ ವೇಳೆ, ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಉಪ್ಪಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ₹10 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮದ್ ಗುಲ್ಜಾರ್ ಎಂಬಾತನನ್ನು ಬಂಧಿಸಲಾಗಿದೆ.

ಎರಡೂ ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದು, ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ ಮಾಡಿದ್ದಾರೆ.

ನಕಲಿ ಸಿಗರೇಟ್‌ಗಳ ಮೂಲ ಯಾವುದು, ಅವುಗಳನ್ನು ಎಲ್ಲಿಂದ ತರಲಾಗಿತ್ತು ಹಾಗೂ ಈ ಅಕ್ರಮ ಸಾಗಾಟದ ಹಿಂದೆ ಇನ್ನಷ್ಟು ಮಂದಿ ಇದ್ದಾರೆಯೇ ಎಂಬ ಬಗ್ಗೆ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker