ಚಲಿಸುವಾಗಲೇ ಬಸ್ನ ಟೈರ್ ಕಳಚಿ ಅವಾಂತರ ! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ
ಚಿಕ್ಕಮಗಳೂರು, ಅಕ್ಟೋಬರ್ 15 : ಚಲಿಸುತ್ತಿದ್ದ KSRTC ಬಸ್ನ ಟೈರ್ ದಿಢೀರನೆ ಕಳಚಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ತಪ್ಪಿದ್ದು, ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಶೃಂಗೇರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ತಲುಪುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಬಸ್ ಚಲಿಸುತ್ತಿದ್ದಾಗಲೇ ದಿಢೀರನೆ ಟೈರ್ ಕಳಚಿಬಿದ್ದಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, … Continue reading ಚಲಿಸುವಾಗಲೇ ಬಸ್ನ ಟೈರ್ ಕಳಚಿ ಅವಾಂತರ ! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ
Copy and paste this URL into your WordPress site to embed
Copy and paste this code into your site to embed