ಕ್ರೀಡೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮುಖೇಶ್ ಅಂಬಾನಿ ಭೇಟಿ!

ಉಡುಪಿ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.